ವಿಜಯ ರಾಘವೇಂದ್ರ, ಪ್ರಿಯಾಂಕ ಅಭಿನಯ್ದ 'ಐ.ಪಿ.ಸಿ ಸೆಕ್ಷನ್ 300' ಚಿತ್ರ ಈ ವಾರ(ನ.13) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ ಎಂದು ನಿರ್ಮಾಪಕ ಆರ್.ಶಂಕರ್ ತಿಳಿಸಿದ್ದಾರೆ. ಶ್ರೀಚೌಡೇಶ್ವರಿ ಪ್ರಸನ್ನ ಮೂವೀಸ್ ಲಾಂಛನದಲ್ಲಿ ಈ ಚಿತ್ರವನ್ನು ಶಂಕರ್ ನಿರ್ಮಿಸಿದ್ದಾರೆ.
ಕುತೂಹಲ ಸನ್ನಿವೇಶಗಳೊಂದಿಗೆ ವಿಭಿನ್ನ ಕಥಾ ಹಂದರವುಳ್ಳ ಈ ಚಿತ್ರವನ್ನು ಶಶಿಕಾಂತ್ ನಿರ್ದೇಶಿಸಿದ್ದಾರೆ. ನಿರ್ದೇಶಕರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರದಲ್ಲಿ ನಾಯಕ ವಿಜಯ ರಾಘವೇಂದ್ರ ವಕೀಲರಾಗಿ ಅಭಿನಯಿಸಿದ್ದಾರೆ. ವೀರಸಮರ್ಥ್ ಸಂಗೀತ ಸಂಯೋಜಿಸಿರುವ ಈ ಚಿತ್ರಕ್ಕೆ ನಿರಂಜನ್ ಬಾಬು ಛಾಯಾಗ್ರಹಣ ನೀಡಿದ್ದಾರೆ.
ಈಶ್ವರ್ ಸಂಕಲನ, ಬಾಬು ಖಾನ್ ಕಲೆ, ಅರುಣ್ ಕುಮಾರ್ ಸಹ ನಿರ್ದೇಶನ, ಅಚ್ಯುತ್ ರಾವ್ ನಿರ್ಮಾಣ ನಿರ್ವಹಣೆ, ಹಾಗೂ ಎಚ್.ನರಸಿಂಹ (ಜಾಲಹಳ್ಳಿ) ನಿರ್ಮಾಣ ಮೇಲ್ವಿಚಾರಣೆಯಿರುವ ಚಿತ್ರದ ತಾರಾಬಳಗದಲ್ಲಿ ವಿಜಯರಾಘವೇಂದ್ರ, ಪ್ರಿಯಾಂಕ, ದೇವರಾಜ್, ಸುಮನ್ ರಂಗನಾಥ್, ಸೃಜನ್ ಲೋಕೇಶ್, ಯತಿರಾಜ್, ಶಂಕರ್, ರವೀಂದ್ರನಾಥ್ ಮುಂತಾದವರಿದ್ದಾರೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
ಈ ಲೇಖನಕ್ಕೆ ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ.