clear
clear
clear
clear
x

ಖಾಸಗಿ ಶಾಲೆಯ ಶುಲ್ಕ ವಸೂಲಿ ಬಗ್ಗೆ ನಿಗಾ : ಬಿಇಒ

ಬುಧವಾರ, ಜೂನ್ 3, 2009, 12:14[IST]
Vote this article
Up  
Down  


ಕೊಪ್ಪಳ, ಜೂ. 3: ಮಕ್ಕಳನ್ನು ಶಾಲೆಗೆ ದಾಖಲಿಸುವ ಸಂದರ್ಭದಲ್ಲಿ ನಿಗದಿಪಡಿಸಿದ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡುವ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿ ಎ. ಶ್ಯಾಮಸುಂದರ್ ಅವರು ತಿಳಿಸಿದ್ದಾರೆ.

ಕೊಪ್ಪಳ ತಾಲೂಕಿನಲ್ಲಿರುವ ಖಾಸಗಿ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನಿಗದಿಪಡಿಸಲಾಗಿರುವ ಶುಲ್ಕದ ವಿವರ ಹಾಗೂ ಇಲಾಖೆಯಿಂದ ಮಾನ್ಯತೆ ಪಡೆದಿರುವ ಅಧಿಕೃತ ಶಾಲೆಗಳ ವಿವರವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ಪ್ರಸಕ್ತ ಶೈಕ್ಷಣಿಕ ಸಾಲಿಗಾಗಿ ಮಕ್ಕಳನ್ನು ಖಾಸಗಿ ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ದಾಖಲಾತಿ ಮಾಡುವಾಗ, ಇಲಾಖೆ ನಿಗದಿಪಡಿಸಿದ ಶುಲ್ಕಕ್ಕಿಂತ ಹೆಚ್ಚಿಗೆ ಶುಲ್ಕ ಅಥವಾ ವಂತಿಗೆಯನ್ನು ವಸೂಲಾತಿ ಮಾಡುವ ಸಂಸ್ಥೆಗಳ ಬಗ್ಗೆ ಪಾಲಕರು / ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ದೂರು ಸಲ್ಲಿಸಿದಲ್ಲಿ, ಅಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಜರುಗಿಸಲಾಗುವುದು.

ಅಲ್ಲದೆ ಪಾಲಕರು ತಮ್ಮ ಮಕ್ಕಳನ್ನು ಶಿಕ್ಷಣ ಇಲಾಖೆಯಿಂದ ಮಾನ್ಯತೆ ಹೊಂದಿರುವ ಅಧಿಕೃತ ಶಾಲೆಗಳಿಗೆ ಮಾತ್ರ ದಾಖಲು ಮಾಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಎ. ಶ್ಯಾಮಸುಂದರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ದಟ್ಸ್ ಕನ್ನಡವಾರ್ತೆ)



ಜೂನ್ 3, 2009 ರ ಇತರೆ ಸುದ್ದಿ/ಲೇಖನಗಳನ್ನು ಓದಿ
User Comments
[ ಅಭಿಪ್ರಾಯ ಬರೆಯಿರಿ ]


ಈ ಲೇಖನಕ್ಕೆ ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ.

  ಸುದ್ದಿ-ರಂಜನೆ
Live Chat with a Doctor
ದಟ್ಸ್ ಕನ್ನಡ ಡಾಕ್ಟರೊಂದಿಗೆ ಚಾಟ್
  ವಿಡಿಯೋ
  ನುಡಿಚಿತ್ರಗಳು