ಬೆಂಗಳೂರು : ಅಮೆರಿಕಾದ ವಾಷಿಂಗ್ಟನ್ ಡಿಸಿಯಲ್ಲಿ ನಡೆಯಲಿರುವ ನಾಲ್ಕನೇ ವಿಶ್ವ ಕನ್ನಡ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪಾಲ್ಗೊಳ್ಳುವ ಸಾಧ್ಯತೆ ಕ್ಷೀಣಿಸಿದೆ. ಉಪಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮ್ಮೇಳನದಲ್ಲಿ ಸರ್ಕಾರವನ್ನು ಪ್ರತಿನಿಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ಹೇಳಿವೆ.
ಸೆಪ್ಟೆಂಬರ್ 1ರಿಂದ 3ರವರೆಗೆ ನಡೆಯಲಿರುವ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಪಾಲ್ಗೊಳ್ಳುವ ಕಾರ್ಯಕ್ರಮ ನಿಗದಿಯಾಗಿತ್ತು. ಈ ಪ್ರವಾಸ ಸಂದರ್ಭದಲ್ಲಿ ಅಮೆರಿಕಾ ಹೂಡಿಕೆದಾರರನ್ನು ರಾಜ್ಯಕ್ಕೆ ಆಹ್ವಾನಿಸುವ ಯೋಜನೆಯೂ ಇತ್ತು.
ರಾಜ್ಯದಲ್ಲಿ ತಲೆದೋರಿರುವ ಬರ ಹಾಗೂ ಪ್ರವಾಹ ಪರಿಸ್ಥಿತಿ ಕಾರಣ, ಈ ಪ್ರವಾಸ ರದ್ದುಪಡಿಸಬೇಕೆಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಪ್ರವಾಸ ರದ್ದುಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
(ದಟ್ಸ್ ಕನ್ನಡ ವಾರ್ತೆ)
ರ ಇತರೆ ಸುದ್ದಿ/ಲೇಖನಗಳನ್ನು ಓದಿ