clear
clear
Search results for "Bengaluru rural" in Oneindia Kannada
ಬೆಂಗಳೂರು, ಆ.22: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಾಣಿಸಿಕೊಂಡಿರುವ ಡೆಂಗ್ಯೂ, ಚಿಕನ್‌ಗುನ್ಯ, ಹೆಚ್1ಎನ್1 ಇತ್ಯಾದಿ ಸಾಂಕ್ರಮಿಕ ರೋಗಗಳು ಒಬ್ಬರಿಂದ ಒಬ್ಬರಿಗೆ ಬಹುಬೇಗ ಹರಡುತ್ತಿವೆ. ಕೂಡಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಾದ ಕಾರಣ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ನಗರಸಭೆ/ಪುರಸಭೆ/ಪಟ್ಟಣ ಪಂಚಾಯತ್ತಿಗಳ ಅಧಿಕಾರಿಗಳು, ಸಮರೋಪಾದಿಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್. ಕೆ. ರಾಜು ತಿಳಿಸಿದರು. ಜನಸಾಮಾನ್ಯರು ಆತಂಕ-ಭೀತಿಗೊಳ್ಳದ

ಬೆಂಗಳೂರು, ಮೇ. 28 : ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇಂದು ತಮ್ಮ ಶಾಸಕ ಸ್ಥಾನ ರಾಜೀನಾಮೆ ನೀಡಿರುವ ಪತ್ರವನ್ನು ವಿಧಾನಸಭಾಧ್ಯಕ್ಷ ಜಗದೀಶ್ ಶೆಟ್ಟರ್ ಅವರಿಗೆ ರವಾನಿಸಿದ್ದಾರೆ ಎನ್ನಲಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಚಿತ್ತಾಪುರ ಮೀಸಲು ಕ್ಷೇತ್ರದ ಶಾಸಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರದಲ್ಲಿ

ಬೆಂಗಳೂರು, ಮೇ. 27 : ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಜೂನ್ 1 ರಂದು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕೂ ಮುನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯುಪಿಎ ಸರಕಾರಕ್ಕೆ ಬೆಂಬಲ ನೀಡಲೆಂದು ದೆಹಲಿಗೆ ತೆರಳಿದ್ದೆ. ಸಚಿವ

ಬೆಂಗಳೂರು, ಮೇ. 21 : ಕೇಂದ್ರದಲ್ಲಿ ಸಚಿವರಾಗುವ ಆಸೆ ಈಡೇರದಿದ್ದರೆ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವ ಸಂಭವ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ಪಕ್ಷ ಕೇಂದ್ರ ಸಚಿವ ಸ್ಥಾನವನ್ನು ನೀಡಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ತಿಳಿಸಿದೆ ಹಿನ್ನೆಲೆಯಲ್ಲಿ ಜೆಡಿಎಸ್ ವಲಯದಲ್ಲಿ ಈ ಸುದ್ದಿ ದಟ್ಟವಾಗಿದೆ. ಕೇಂದ್ರದಲ್ಲಿ

ಬೆಂಗಳೂರು, ಮೇ 16 : 2004ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಅಪ್ಪನಿಗಾದ ಹೀನಾಯ ಸೋಲಿಗೆ 15ನೇ ಲೋಕಸಭೆ ಚುನಾವಣೆಯಲ್ಲಿ ಮಗ ಸೇಡು ತೀರಿಸಿಕೊಂಡಿದ್ದಾರೆ.ಕಳೆದ ಲೋಕಸಭೆ ಚುನಾವಣೆಯಲ್ಲಿ ಕನಕಪುರ ಕ್ಷೇತ್ರದಿಂದ ಸ್ಪರ್ಧಿಸಿ ಮಾಡಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಾಂಗ್ರೆಸ್ ನ ತೇಜಸ್ವಿನಿ ರಮೇಶ್ ಗೌಡ ಅವರ ಕೈಯಲ್ಲಿ ಅವಮಾನಕರ ರೀತಿಯಲ್ಲಿ ಸೋಲನ್ನು ಅನುಭವಿಸಿದ್ದರು. ಈ ಚುನಾವಣೆಯಲ್ಲಿ ಅದೇ ತೇಜಸ್ವಿನಿಯನ್ನು

ಬೆಂಗಳೂರು, ಏ. 24 : ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಜೆಡಿಎಸ್ ಭಾರಿ ಅಕ್ರಮ ಎಸಗಿರುವ ಹಿನ್ನೆಲೆಯಲ್ಲಿ ಈ ಕ್ಷೇತ್ರದಲ್ಲಿ ಮರುಮತದಾನ ನಡೆಸಬೇಕು ಎಂದು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ರಾಜ್ಯ ಚುನಾವಣೆ ಆಯೋಗವನ್ನು ಒತ್ತಾಯಿಸಿವೆ. ಚೆನ್ನಪಟ್ಟಣದ ಮತಕೇಂದ್ರವೊಂದರಲ್ಲಿ ಮತಗಟ್ಟೆ ಅಧಿಕಾರಿಯೇ ಜೆಡಿಎಸ್ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪರವಾಗಿ ಮತ ಚಲಾಯಿಸಿ

ಬೆಂಗಳೂರು, ಏ. 23 : ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬರುವ ನೆಲಮಂಗಲ ತಾಲೂಕಿನ ಗೆದ್ದಲಹಳ್ಳಿಯಲ್ಲಿ ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಅಸುನೀಗಿದ ಘಟನೆ ಇಂದು ಜರುಗಿದೆ.ಚುನಾವಣಾ ಆಯೋಗದ ಮೈಕ್ರೋ ವೀಕ್ಷಕಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಟಿಬಿ ಕೃಷ್ಣಪ್ಪ ಅವರು ಕರ್ತವ್ಯನಿರತರಾಗಿದ್ದಾಗಲೇ ಎದೆ ನೋವು ಬರುತ್ತಿರುವುದಾಗಿ ದೂರಿದರು. ಅವರನ್ನು ಆಸ್ಪತ್ರೆಗೆ ಸಾಗಿಸುವಾಗಲೇ ಮೃತರಾದರು.ರಾಮನಗರ ಜಿಲ್ಲೆಯ

ಬೆಂಗಳೂರು, ಏ. 9 : ಮಂಗಳೂರು ಪಬ್ ದಾಳಿ, ಪ್ರೇಮಿಗಳ ದಿನಾಚರಣೆ ವಿರೋಧಿಸಿ ಕುಖ್ಯಾತಿ ಪಡೆದಿದ್ದ ಶ್ರೀರಾಮಸೇನೆ ಸಂಘಟನೆ ಇದೀಗ ಇನ್ನೊಂದು ಮುಖವಾಡ ಹಾಕಿಕೊಂಡು ಚುನಾವಣೆ ಕ್ಷೇತ್ರಕ್ಕೆ ಧುಮುಕಲು ಸಜ್ಜಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಯಾವುದೇ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಹಣ, ಹೆಂಡ, ಸೀರೆ ಹಂಚುವುದು ಕಂಡು ಬಂದಲ್ಲಿ ದಾಳಿ ನಡೆಸಿ ಅವುಗಳನ್ನು ಚುನಾವಣಾ

ಬೆಂಗಳೂರು, ಮಾ.30: ಕಾಂಗ್ರೆಸ್ ನಲ್ಲಿನ ನಾಯಕತ್ವದ ಕೊರತೆ, ಗುಂಪುಗಾರಿಕೆಯಿಂದ ಬೇಸತ್ತು ಚನ್ನಪಟ್ಟಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೀಶ್ವರ್ ಪಕ್ಷ ತೊರೆಯುತ್ತಿರುವುದಾಗಿ ತಿಳಿಸಿದ್ದು, ಸೋಮವಾರ (ಮಾ.30) ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಹುಬ್ಬಳ್ಳಿಯಲ್ಲಿರುವ ವಿಧಾನಸಭೆ ಸ್ಪೀಕರ್ ಜಗದೀಶ ಶೆಟ್ಟರ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರವನ್ನು ಅವರಿಗೆ ಸಮರ್ಪಿಸಲಿದ್ದಾರೆ. ರಾಜೀನಾಮೆ ಸಲ್ಲಿಸಿದ ನಂತರ ವಿದ್ಯುಕ್ತವಾಗಿ ಯೋಗೀಶ್ವರ್

ಬೆಂಗಳೂರು, ಜ. 3 : ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿಯಲ್ಲಿ ನಾಲ್ವರ ಕುಟುಂಬವೊಂದು ಸಾಮೂಹಿಕ ಆತ್ಮಹತ್ಯೆಗೆ ಮುಂದಾಗಿರುವ ಘಟನೆ ಕಳೆದ ರಾತ್ರಿ ಜರುಗಿದೆ. ನಾಲ್ವರು ಇಲಿಪಾಶಾಣ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ.ಈ ಘಟನೆಯಲ್ಲಿ ತಂದೆ ಮುನಿರಾಜು ಮತ್ತು 10 ವರ್ಷದ ಮಗಳು ಸಾವಿಗೀಡಾಗಿದ್ದು, ಮುನಿರಾಜುವಿನ ಹೆಂಡತಿ ಕಮಲಮ್ಮ ಮತ್ತು ಇನ್ನೊಬ್ಬ ಮಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಮಲಮ್ಮ ಅಪಾಯದಿಂದ ಪಾರಾಗಿದ್ದಾರೆ.

  ಸುದ್ದಿ-ರಂಜನೆ
Live Chat with a Doctor
ದಟ್ಸ್ ಕನ್ನಡ ಡಾಕ್ಟರೊಂದಿಗೆ ಚಾಟ್
  ವಿಡಿಯೋ
  ನುಡಿಚಿತ್ರಗಳು