ನವದೆಹಲಿ, ನ. 21 : ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಬಿರುಸಿನ ವಿದ್ಯಮಾನಗಳು ನಡೆಯುತ್ತಿರುವ ಬೆನ್ನಲ್ಲೇ ಬಿಜೆಪಿ ಹುಟ್ಟಡಗಿಸಲು ಜೆಡಿಎಸ್ ಮುಂದಾಗಿದೆ. ಬಿಜೆಪಿ ಸೋಲಿಸುವ ಏಕೈಕ ಉದ್ದೇಶದಿಂದ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಕ್ತ ಮನಸ್ಸು ಹೊಂದಿದ್ದೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಹೇಳಿ ರಾಜಕೀಯ ವಲಯದಲ್ಲಿ ಮತ್ತೆ ಸಂಚಲನ ಸೃಷ್ಟಿಸಿದ್ದಾರೆ.ಚಳಿಗಾಲದ
ಬೆಳಗಾವಿ, ನ. 20 : ಕಳೆದ ಹಲವಾರು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ ಬಿ ಶಂಕರಾನಂದ ಶುಕ್ರವಾರ ಬೆಳಕಿನ ಜಾವ 2 ಗಂಟೆಗೆ ನಗರದ ಕೆಎಲ್ ಇ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಶಂಕರಾನಂದ ನಿಧನಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಶೋಕ ವ್ಯಕ್ತಪಡಿಸಿದ್ದು, ಕುಟುಂಬ ಸದಸ್ಯರಿಗೆ ದುಃಖ
ವಿಜಯವಾಡ, ನ. 18 : ಭವಿಷ್ಯದ ಭಾರತದ ಪ್ರಧಾನಮಂತ್ರಿ ಎಂದು ಯಾರೂ ನನ್ನನ್ನು ಬಿಂಬಿಸಬಾರದು ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರು ಜನರಲ್ಲಿ ಮಾಡಿಕೊಂಡ ಮನವಿ ಇದು. ನಗರದಲ್ಲಿ ಏರ್ಪಡಿಸಲಾಗಿದ್ದ ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮವೊಂದರಲ್ಲಿ ವಿದ್ಯಾರ್ಥಿಯೊಬ್ಬನ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನನ್ನನ್ನು ಭಾರತದ ಭಾವಿ ಪ್ರಧಾನಿ ಎಂದು ಬಿಂಬಿಸಬಾರದು ಎಂದರು. ಭಾರತದ
ಚನ್ನಪಟ್ಟಣ, ನ. 9 : ಚನ್ನಪಟ್ಟಣದ ಮಾಜಿ ಶಾಸಕ ಸಿಪಿ ಯೋಗೀಶ್ವರ್ ಮಂತ್ರಿಯಾಗುವ ಭ್ರಮೆಯಿಂದ ಆಪರೇಷನ್ ಕಮಲಕ್ಕೊಳಗಾಗಿದ್ದರು. ಇದರಿಂದ ಲೋಕಸಭಾ ಚುನಾವಣೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿಯವರ ವಿರುದ್ದ ಹೀನಾಯವಾಗಿ ಪರಾಭವಗೊಂಡರು. ನಂತರ ಎದುರಾದ ಚನ್ನಪಟ್ಟಣ ಉಪಚುನಾವಣೆಯಲ್ಲೂ ಕ್ಷೇತ್ರದ ಮತದಾರರಿಂದ ತಿರಸ್ಕೃತಗೊಳಗಾದರು. ಕೇಸರಿ ಪಾಳೆಯಕ್ಕೆ ಜಿಗಿಯುವ ಮೊದಲು ಮತ್ತು ನಂತರ ಕಾಂಗ್ರೆಸ್ನ ಪ್ರಭಾವಿ ಮುಖಂಡ ಡಿ.ಕೆ.ಶಿವಕುಮಾರ್ ವಿರುದ್ದ ಬಹಿರಂಗವಾಗಿ ಬಾಯಿಗೆ ಬಂದಂತೆ
ಮುಂಬೈ, ನ. 4 : ಇತ್ತೀಚೆಗೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಭರ್ಜರಿ ಜಯಗಳಿಸಿರುವ ಕಾಂಗ್ರೆಸ್ ಎನ್ ಸಿಪಿಗಳ ಸೀಟು ಹಂಚಿಕೆ ವಿಳಂಬ ಮುಂದುವರೆದಿದ್ದು, 24 ಗಂಟೆಗಳಲ್ಲಿ ಪೂರ್ಣ ಪ್ರಮಾಣದ ಸರಕಾರ ಜಾರಿಗೆ ಬರದಿದ್ದಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕು ಎಂದು ಪ್ರತಿಪಕ್ಷ ಬಿಜೆಪಿ ಶಿವಸೇನೆ ಒತ್ತಾಯಸಿಸಿವೆ. ವಿಧಾನಸಭೆ ಚುನಾವಣೆಗಳ ಫಲಿತಾಂಶ ಹೊರಬಿದ್ದು 13 ದಿನಗಳು ಸಂದಿವೆ. ಮುಖ್ಯಮಂತ್ರಿಯಾಗಿ ಕಾಂಗ್ರೆಸ್ಸಿನ ಅಶೋಕ್
ಬೆಂಗಳೂರು, ನ. 3 : ಹತ್ತು ದಿನಗಳಾದರೂ ಬಿಜೆಪಿ ಸರಕಾರದಲ್ಲಿ ಉಂಟಾಗಿರುವ ಭಿನ್ನಮತ ಶಮನಗೊಳ್ಳದಿರುವ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಮಹತ್ವ ವಿದ್ಯಮಾನವೊಂದು ನಡೆದಿದೆ. ಬಿಜೆಪಿಯ ಆಂತರಿಕ ಕಚ್ಚಾಟದ ಲಾಭ ಪಡೆಯುವುದಿಲ್ಲ ಎಂದು ಹೇಳುತ್ತಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ತೆರೆಮರೆಯಲ್ಲಿ ರಾಜ್ಯದಲ್ಲಿ ಮತ್ತೊಮ್ಮೆ ಸಮ್ಮಿಶ್ರ ಸರಕಾರ ತರಲು ಹವಣಿಸುತ್ತಿವೆ.ಇದಕ್ಕೆ ಪುಷ್ಟಿ ನೀಡುವಂತಹ ಪ್ರಸಂಗವೊಂದು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ.
ನವದೆಹಲಿ, ಅ. 25 : ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ, ಹರಿಯಾಣ ಪ್ರದೇಶ ಮುಖ್ಯಮಂತ್ರಿಗಳ ಆಯ್ಕೆ ಪ್ರಕ್ರಿಯೆ ಕೊನೆಗೂ ತೆರೆಬಿದ್ದಿದೆ. ಈ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಿದ ನಂತರ ಮುಖ್ಯಮಂತ್ರಿ ಆಯ್ಕೆ ಭಾರಿ ಕಸರತ್ತು ಆರಂಭವಾಗಿತ್ತು. ಶನಿವಾರ ಮಧ್ಯರಾತ್ರಿ ಮಹಾರಾಷ್ಟ್ರಕ್ಕೆ ಅಶೋಕ್ ಚವಾಣ್ ಮತ್ತು ಹರಿಯಾಣ ರಾಜ್ಯಕ್ಕೆ ಭೂಪಿಂದರ್ ಸಿಂಗ್ ಹೂಡಾ ಅವರನ್ನೇ ಮುಖ್ಯಮಂತ್ರಿ ಸ್ಥಾನದಲ್ಲಿ
ಮುಂಬೈ, ಅ. 23 : ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿರುವ ಕಾಂಗ್ರೆಸ್ ಪಕ್ಷ ಈಗ ನೂತನ ಸಾರಥಿಗಾಗಿ ಹುಡುಕಾಟ ಆರಂಭಿಸಿದೆ. ಅಶೋಕ್ ಚವಾಣ್ ಅವರ ಹೆಸರು ಮುಖ್ಯಮಂತ್ರಿ ಗಾದಿಗೆ ಬಲವಾಗಿ ಕೇಳಿ ಬರುತ್ತಿದ್ದು, ಹೈಕಮಾಂಡ್ ಕೂಡಾ ಚವಾಣ್ ಅವರನ್ನೇ ಮುಂದುವರಿಸುವ ಇರಾದೆ ಹೊಂದಿದೆ ಎಂಬ ಅಂಶವೂ ನವದೆಹಲಿ 10 ಜನಪಥ್ ಅಂಗಳದಿಂದ ಹೊರಬಿದ್ದಿದೆ. ಕಳೆದ ಒಂಬತ್ತು ತಿಂಗಳಲ್ಲಿ
ಮುಂಬೈ, ಅ. 23 : ಕಳೆದ ಲೋಕಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿ ಕೇಂದ್ರದ ಅಧಿಕಾರ ಚುಕ್ಕಾಣಿ ಹಿಡಿದಿದ್ದ ಕಾಂಗ್ರೆಸ್ ಪಕ್ಷ ಮಿನಿ ಮಹಾಸಮರ ಎಂದೇ ಬಿಂಬಿಸಲಾಗಿದ್ದ ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಕೈ ಪಡೆ ಕಮಾಲ್ ತೋರಿಸಿದೆ. ಮಹಾರಾಷ್ಟ್ರ, ಅರುಣಾಚಲ ಪ್ರದೇಶದಲ್ಲಿ ನಿಚ್ಚಳ ಬಹುಮತ ಪಡೆದಿದ್ದರೆ, ಹರಿಯಾಣದಲ್ಲಿ ಮೇಲಗೈ ಪಡೆಯುವಲ್ಲಿ ಯಶಸ್ವಿಯಾಗಿದೆ. ಮಹಾರಾಷ್ಟ್ರದ
ನವದೆಹಲಿ ಅ 22: ಮಹಾರಾಷ್ಟ್ರ, ಹರಿಯಾಣ ಮತ್ತು ಅರುಣಾಚಲ ಪ್ರದೇಶ ರಾಜ್ಯಗಳ ವಿಧಾನ ಸಭೆಗಳಿಗೆ ಅಕ್ಟೋಬರ್ 13ರಂದು ನಡೆದ ಮತದಾನದ ಬಹುತೇಕ ಫಲಿತಾ೦ಶ ಹೊರಬಂದಿದ್ದು ಆಡಳಿತ ಕಾಂಗ್ರೆಸ್ ಪಕ್ಷ ಅಧಿಕಾರ ಉಳಿಸಿಕೊಂಡಿದೆ. ಚುನಾವಣೆಯಲ್ಲಿ ಗೆದ್ದ ಮತ್ತು ಸೋತ ಪ್ರಮುಖ ನಾಯಕರುಗಳ ಪಟ್ಟಿ ಇಂತಿದೆ:ಮಹಾರಾಷ್ಟ್ರ* ಮುಖ್ಯಮಂತ್ರಿ ಅಶೋಕ್ ಚವಾಣ್ ಭೋಕರ್ ಕ್ಷೇತ್ರದಿಂದ ಜಯ.* ಕಾಂಗ್ರೆಸ್