ಉದ್ಯಮಿ ಅಶೋಕ್ ಖೇಣಿ ಅವರ 60ನೇ ಹುಟ್ಟುಹಬ್ಬ ಸಂಭ್ರಮ ಮೈಸೂರಿನಲ್ಲಿ ವಿಜೃಂಭಣೆಯಿಂದ ನಡೆಯಿತು. ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ನಟರು ಹುಟ್ಟುಹಬ್ಬ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಮಹಾರಾಜ ಕಾಲೇಜು ಮೈದಾನದಲ್ಲಿ ಸರಿ ಸುಮಾರು 30,000ಕ್ಕೂ ಹೆಚ್ಚು ಅಶೋಕ್ ಖೇಣಿ ಅಭಿಮಾನಿಗಳ ಜಾತ್ರೆಯೇ ನೆರೆದಿತ್ತು. ಭಾನುವಾರ ಮಂಡ್ಯದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಅಶೋಕ್ ಖೇಣಿ ಸೋಮವಾರ
ಬೆಂಗಳೂರು, ಅ. 1 : ಅಕ್ಟೋಬರ್ 15 ರೊಳಗೆ ನೈಸ್ ಸಂಸ್ಥೆಯ ಬಿಎಂಐಸಿ ಯೋಜನೆಯ ಎಲ್ಲಾ ಅಕ್ರಮಗಳನ್ನು ಕುರಿತು ಚರ್ಚಿಸಲು ಅಧಿವೇಶನ ಕರೆಯುವ ದಿನಾಂಕ ಪ್ರಕಟಿಸದಿದ್ದರೆ ರೈತರನ್ನು ಒಗ್ಗೂಡಿಸಿ ಬೀದಿಗಿಳಿದು ಹೋರಾಟ ನಡೆಸಲಾಗುವುದು ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಪಕ್ಷದ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು, ಬಿಎಂಐಸಿ ಯೋಜನೆಯ
ಬೆಂಗಳೂರು, ಸೆ. 24 : ಬೆಂಗಳೂರು-ಮೈಸೂರು ಇನ್ ಫ್ರಾಸ್ಟ್ರಕ್ಚರ್ ಕಾರಿಡಾರ್ (NICE)ಯೋಜನೆಯಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ಚರ್ಚಿಸಲು ಅಕ್ಟೋಬರ್ ತಿಂಗಳು ವಿಶೇಷ ಅಧಿವೇಶನ ಕರೆಯುವಂತೆ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಒತ್ತಾಯಿಸಿದ್ದಾರೆ. ಇನ್ನೊಂದಡೆ ತೀವ್ರ ಟೀಕೆಗಳ ಹಿನ್ನೆಲೆಯಲ್ಲಿ ನಾಲಿಗೆ ಬಿಗಿ ಹಿಡಿದು ಮಾತಾಡಿ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು, ಸೆ. 9 : ಗೊಟ್ಟಿಗೆರೆ ಬಳಿ ನಿರ್ಮಿಸಲು ಉದ್ದೇಶಿಸಿರುವ ಪೆರಿಫೆರಲ್ ರಸ್ತೆ ಸಂಬಂಧ ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಹಾಗೂ ಇತರ ಎಂಟು ನಿರ್ದೇಶಕರಿಗೆ ಹೈಕೋರ್ಟ್ ತುರ್ತು ನೋಟಿಸ್ ಜಾರಿ ಮಾಡಿದೆ. ಎಚ್ ವಿ ವಿಜಯರಾಘವನ್ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮಂಜುಳಾ ಚೆಲ್ಲೂರ್ ಹಾಗೂ ಜವ್ವಾದ್ ರಹೀಂ ಅವರ ಪೀಠ ಆದೇಶ ನೀಡಿದೆ.
ಬೆಂಗಳೂರು, ಸೆ. 1 : ನೈಸ್ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ವಿಚಾರಣೆ ನಡೆಸಿದ ಹೈಕೋರ್ಟ್ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕಂದಾಯ ಸಚಿವ ಕರುಣಾಕರರೆಡ್ಡಿ ಹಾಗೂ ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಅವರಿಗೆ ನೋಟಿಸ್ ಜಾರಿ ಮಾಡಿದೆ. ಬನ್ನೇರುಘಟ್ಟ ರಸ್ತೆ, ಗೊಟ್ಟಗೆರೆ ಬಳಿ ನೈಸ್ ರಸ್ತೆ ನಿರ್ಮಾಣ ಸಂಬಂಧ ನ್ಯಾಯಾಲಯ ನೀಡಿರುವ ತೀರ್ಪನ್ನು ಉಲ್ಲಂಘಿಸಿರುವ
ಬೆಂಗಳೂರು, ಜು. 27 : ರಾಜ್ಯದ ಪ್ರಮುಖ ರಾಜಕಾರಣಿಯೊಬ್ಬರು ನೈಸ್ ರಸ್ತೆ ನಿರ್ಮಾಣ ಯೋಜನೆಗೆ ಅಡ್ಡಗಾಲು ಹಾಕುತ್ತಿದ್ದಾರೆ. ಅವರಿಂದ ಅಷ್ಟೇ ಅಲ್ಲ ಯಾವುದೇ ರಾಜಕಾರಣಿ ಹಾಗೂ ಅಧಿಕಾರಿಗಳಿಂದ ಈ ಯೋಜನೆ ಸ್ಥಗಿತಗೊಳಿಸಲು ಸಾಧ್ಯವಿಲ್ಲ ಎಂದು ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಪರೋಕ್ಷವಾಗಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಆದಿಚುಂಚನಗಿರಿ ಮಹಾಸಂಸ್ಥಾನಮಠ ಮತ್ತು
ಬೆಂಗಳೂರು, ಮಾ. 28 : 600 ಕೋಟಿ ರು. ಬೆಲೆಯ 1900 ಎಕರೆ ಜಮೀನನ್ನು ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್ಪ್ರೈಸಸ್(ನೈಸ್)ಗೆ ಬಿಜೆಪಿ ಸರ್ಕಾರ ನೀಡುವುದನ್ನು ತಡೆಹಿಡಿಯಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲೆಂದು ಜಮೀನು ನೀಡಲಾಗುತ್ತಿದೆ ಎಂದಿರುವ ಕುಮಾರಸ್ವಾಮಿ, ಬಿಜೆಪಿ ಸರ್ಕಾರ ನೀತಿ ಸಂಹಿತೆ ಉಲ್ಲಂಘಿಸಿದೆ
ಬೆಂಗಳೂರು, ಮಾ. 22 : ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಹಾಸನ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಕ್ಷೇತ್ರದಿಂದ ಸ್ಪರ್ಧಿಸುವಂತೆ ಒಂದಕ್ಕಿಂತ ಹೆಚ್ಚು ಪಕ್ಷಗಳು ತಮ್ಮನ್ನು ಕೇಳಿಕೊಂಡಿವೆ. ಆದರೆ, ಈ ಬಗ್ಗೆ ಇನ್ನೂ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ. ಮುಂದಿನ ನಾಲ್ಕು ದಿನಗಳಲ್ಲಿ ರಾಜಕೀಯ ಪ್ರವೇಶದ ಬಗ್ಗೆ ಸ್ಪಷ್ಟ ನಿರ್ಧಾರ ಹೊರಬರಲಿದೆ ಎಂದು ಖೇಣಿ ಹೇಳಿದ್ದಾರೆ.
ಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ
ರವಿ ಬೆಳಗೆರೆಎಸ್ಸೆಂ ಕೃಷ್ಣರ ಕನಸು ನನಸಾಗುವ ದಿನಗಳು ಬಂದೇಬಿಟ್ಟಿದೆ. ಜನವರಿ ತಿಂಗಳಲ್ಲಿ ಸುಪ್ರೀಂ ಕೋರ್ಟಿನ ಇನ್ನೊಂದೇ ಒಂದು ತೀರ್ಪು ಹೊರಬಿದ್ದರೆ ಸಾಕು: ಬೆಂಗಳೂರು ಶುದ್ಧಾನು ಶುದ್ಧ ಸಿಂಗಪೂರ್!‘ನೀವು ಮೈಸೂರು ರೋಡ್ನ ರಾಜ ರಾಜೇಶ್ವರಿ ನಗರದಲ್ಲಿದ್ದೀರಾ? ಇನ್ನು ಕೊಂಚ ಅತ್ತತ್ತ ಬನ್ನಿ. ನಾವು ನಿರ್ಮಿಸುತ್ತಿರುವ ಟೌನ್ಪಿಷ್ಗೆ ಮನೆ ಬದಲಾಯಿಸಿ. ಅಲ್ಲೇ ನಿಮಗೆ ಕ್ಲಬ್ಬು, ಶಾಲೆ, ಆಸ್ಪತ್ರೆ, ಸ್ವಿಮ್ಮಿಂಗ್ ಪೂಲು,