clear
clear
clear
clear
x

ಮಾನಸ ಸರೋವರ ಯಾತ್ರಿಕರಿಗೆ ಪ್ರೋತ್ಸಾಹಧನ

ಮಂಗಳವಾರ, ಜೂನ್ 2, 2009, 10:58[IST]
Vote this article
Up  
Down  


{image-02-manas-sarovar2.jpg thatskannada.oneindia.in}ಬೆಂಗಳೂರು, ಜೂನ್ 2: 2009-10ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದಿಂದ ಪ್ರಥಮ ಬಾರಿಗೆ ಕೈಲಾಸ ಮಾನಸ ಸರೋವರ ಯಾತ್ರೆ ಕೈಗೊಂಡ ಯಾತ್ರಿಕರಿಗೆ ಸರ್ಕಾರ ಪ್ರೋತ್ಸಾಹಧನ ನೀಡಲು ಉದ್ದೇಶಿಸಿರುತ್ತದೆ. ಕರ್ನಾಟಕದ ಖಾಯಂ ನಿವಾಸಿಗಳು, ಸರ್ಕಾರದ ಆದೇಶ ದಿನಾಂಕ 3/6/2006 ರಲ್ಲಿ ನೀಡಿರುವ ಮಾರ್ಗಸೂಚಿಗಳ ಷರತ್ತುಗಳಿಗೆ ಒಳಪಟ್ಟವರು ಮಾತ್ರ ಧನ ಸಹಾಯ ಪಡೆಯಲು ಅರ್ಹರಾಗಿರುತ್ತಾರೆ.

ಈ ಉದ್ದೇಶಕ್ಕಾಗಿ ಪಾಸ್‌ಪೋರ್ಟ್‌ನಲ್ಲಿ ನಮೂದಿಸಲಾಗಿರುವ ಕರ್ನಾಟಕ ರಾಜ್ಯದ ವಿಳಾಸವನ್ನು ಪರಿಗಣಿಸಲಾಗುವುದು. ಈಗಾಗಲೇ ಮಾನಸ ಸರೋವರ ಯಾತ್ರೆ ಕೈಗೊಂಡು ಸರ್ಕಾರದಿಂದ ಧನಸಹಾಯ ಪಡೆದ ಯಾತ್ರಿಕರು, ಈ ಉದ್ದೇಶಕ್ಕಾಗಿ ಎರಡನೇ ಬಾರಿಗೆ ಈ ಧನ ಸಹಾಯ ಪಡೆಯಲು ಅರ್ಹರಾಗುವುದಿಲ್ಲ.

ಸರ್ಕಾರದ ಮಾರ್ಗಸೂಚಿಗಳಿಗೆ ಒಳಪಟ್ಟು ಧನ ಸಹಾಯ ಪಡೆಯಲು ಇಚ್ಫಿಸುವ ಯಾತ್ರಿಕರು ತಾವು ಯಾತ್ರೆ ಮುಗಿಸಿದ್ದಕ್ಕೆ ಪಡೆಯುವ ಪ್ರಮಾಣ ಪತ್ರದ ದಿನಾಂಕದಿಂದ ಎರಡು ತಿಂಗಳ ಒಳಗೆ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, 2ನೇ ಮಹಡಿ, ಮಲೆ ಮಹದೇಶ್ವರ ವಾರ್ತಾಭವನ, ಆಲೂರು ವೆಂಕಟರಾವ್ ರಸ್ತೆ, ಚಾಮರಾಜಪೇಟೆ, ಬೆಂಗಳೂರು - 18 ಈ ಕಚೇರಿಯಲ್ಲಿ ಖುದ್ದಾಗಿ ಪಡೆದು ಅದೇ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಧಾರ್ಮಿಕ ದತ್ತಿ ಆಯುಕ್ತರವರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

(ದಟ್ಸ್ ಕನ್ನಡವಾರ್ತೆ)



ಜೂನ್ 2, 2009 ರ ಇತರೆ ಸುದ್ದಿ/ಲೇಖನಗಳನ್ನು ಓದಿ
User Comments
[ ಅಭಿಪ್ರಾಯ ಬರೆಯಿರಿ ]


ಈ ಲೇಖನಕ್ಕೆ ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ.

  ಸುದ್ದಿ-ರಂಜನೆ
Live Chat with a Doctor
ದಟ್ಸ್ ಕನ್ನಡ ಡಾಕ್ಟರೊಂದಿಗೆ ಚಾಟ್
  ವಿಡಿಯೋ
  ನುಡಿಚಿತ್ರಗಳು